ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ

ಬೆಂಗಳೂರು: ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ.

ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದ್ದು, ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಲಾಗುವುದು.

ಮತಗಟ್ಟೆಗಳು, ಮತಯಂತ್ರಗಳು ಸೇರಿ ಇತರೆ ಸಿದ್ಧತೆ, ಶಾಂತಿಯುತ ಚುನಾವಣೆಗೆ ಕ್ರಮ ಕೈಗೊಂಡಿದ್ದು, ಫೆಬ್ರವರಿ 23ರವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣೆಗೆ ಸಂಬಂಧಿಸಿದ ದೂರು ಕುಂದು ಕೊರತೆಗಳ ಮಾಹಿತಿಗಾಗಿ ಮತದಾರರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ, ದೂರು ನಿವಾರಣಾ ಕೇಂದ್ರ ಸ್ಥಾಪಿಸಲಾಗಿದೆ. 080 22211106, ಇ-ಮೇಲ್ deo.bengaloreu@gmail.com ಮೂಲಕ ದೂರು ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read