BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿಯೇ ಗಡದ್ದಾಗಿ ನಿದ್ದೆಗೆ ಜಾರಿದ ನೂತನ ಎಂಎಲ್ ಸಿ

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಎಂಎಲ್ ಸಿ ಎ.ವಸಂತಕುಮಾರ್ ಗಡದ್ದಾಗಿ ನಿದ್ದೆಗೆ ಜಾರಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ.ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬೀಜ ಮತ್ತು ರಸಗೊಬ್ಬರ ದಾಸ್ತಾನು, ಅತಿವೃಷ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಕುಳಿತಿರುವ ವಿಧಾನ ಪರಿಷತ್ ನೂತನ ಸದಸ್ಯ ಎ.ವಸಂತ ಕುಮಾರ್ ಕುರ್ಚಿ ಮೇಲೆಯೇ ನಿದ್ದೆಗೆ ಜಾರಿದ್ದಾರೆ.

ಸಚಿವರು ಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಚರ್ಚಿಸುತ್ತಿದ್ದರೆ, ಮುಂದಿನ ಸಾಲಿನಲ್ಲಿಯೇ ಕುಳಿತಿರುವ ಪರಿಷತ್ ಸದಸ್ಯ ಮಾತ್ರ ಚಿಂತೆಯಿಲ್ಲದೇ ಆರಾಮವಾಗಿ ನಿದ್ದೆ ಮಾಡುತ್ತಿದ್ದಾರೆ. ಮಾಧ್ಯಮಗಳ ಕ್ಯಾಮರಾ ಪರಿಷತ್ ಸದಸ್ಯ ನಿದ್ದೆಯಲ್ಲಿರುವುದನ್ನು ಸೆರೆ ಹಿಡಿಯುತ್ತಿದ್ದಂತೆ ಪಕ್ಕದಲ್ಲಿ ಕುಳಿತಿರುವವರು ಸದಸ್ಯರನ್ನು ಎಚ್ಚರಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಜನಪ್ರತಿನಿಧಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read