HomeLatest NewsBIG NEWS: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಆದೇಶ ನೀಡಿದ ಸಚಿವ...

BIG NEWS: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಆದೇಶ ನೀಡಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಅರಣ್ಯ ಪ್ರದೇಶದಲ್ಲಿ ಅರ್ಧ ಹೂತಿಟ್ಟ ಸ್ಥಿತಿಯಲ್ಲಿ ಹುಲಿಯ ಕಳೇಬರಹ ಪತ್ತೆಯಾಗಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಸಚಿವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತಿ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular