HomeKarnataka16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿರ್ಬಂಧ: ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿರ್ಬಂಧ: ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ

ಬೆಂಗಳೂರು: ಪ್ರೌಢಶಾಲಾ ಹಂತದವರೆಗಿನ 16 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಸುವುದರ ಮೇಲೆ ನಿರ್ಬಂಧ ವಿಧಿಸುವ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಶಿಕ್ಷಣ ವೈದ್ಯಕೀಯ ತಾಂತ್ರಿಕ ತಜ್ಞರನ್ನು ಒಳಗೊಂಡ ಉನ್ನತ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಅಧಿಕಾರಿಗಳು ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತಿರುವ ತಜ್ಞರು, ಮನೋವೈದ್ಯರು, ತಾಂತ್ರಿಕ ತಜ್ಞರು ಈ ಉನ್ನತ ಸಮಿತಿಯಲ್ಲಿ ಇರುತ್ತಾರೆ.

ಮಕ್ಕಳ ಮೊಬೈಲ್ ಗೀಳಿನ ಪ್ರಮಾಣ, ಮೊಬೈಲ್ ಬಳಕೆಯಿಂದ ಶಿಕ್ಷಣದ ಮೇಲೆ ಉಂಟಾಗುತ್ತಿರುವ ಪರಿಣಾಮ, ಅನುಕೂಲ, ಆರೋಗ್ಯ ಸಮಸ್ಯೆ, ಅನಾನುಕೂಲ ಬಗ್ಗೆ ಉನ್ನತ ಸಮಿತಿ ಅಧ್ಯಯನ ಮಾಡಿ ನೀತಿ ರಚಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನೇಕ ರಾಷ್ಟ್ರಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿದ್ದರೂ ದೀರ್ಘಕಾಲದ ಪರಿಹಾರ ದೊರೆತಿಲ್ಲ. ಹೀಗಾಗಿ ಮಕ್ಕಳ ವಯಸ್ಸು ಸೇರಿ ಅನೇಕ ಅಂಶಗಳನ್ನು ಪರಿಗಣಿಸಿ ನೀತಿ ರೂಪಿಸಬೇಕೆಂಬ ಅಭಿಪ್ರಾಯ ಕೇಳಿ ಬಂದಿದೆ.

ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು ಬಳಕೆ ನಿಯಂತ್ರಣಕ್ಕೆ ಸಮಗ್ರ ಮತ್ತು ಸಮತೋಲನ ನೀತಿ ರೂಪಿಸುವುದು ಸೂಕ್ತವೆಂದು ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್) ಸರ್ಕಾರಕ್ಕೆ ಮನವಿ ಮಾಡಿದೆ, ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳ ವಯಸ್ಸು, ಮನೋವೈಜ್ಞಾನಿಕ ಬೆಳವಣಿಗೆ, ಪೋಷಕರ ಪಾತ್ರ, ಶಾಲಾ ಪರಿಸರದ ವಿಶೇಷತೆ ಗಮನದಲ್ಲಿಟ್ಟುಕೊಂಡು ಮೊಬೈಲ್ ಬಳಕೆ ಸಂಪೂರ್ಣ ನಿಷೇಧದ ಬದಲು ನಿಯಂತ್ರಣಕ್ಕೆ ಸಮಗ್ರ ಹಾಗೂ ಸಮತೋಲನದ ನೀತಿ ರೂಪಿಸಬೇಕೆಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular