HomeKarnatakaನಗ್ನ ಚಿತ್ರ ಸೆರೆಹಿಡಿದ ಕಿಡಿಗೇಡಿ ಬೆನ್ನಟ್ಟಿ ಹಿಡಿದ ವಿದ್ಯಾರ್ಥಿನಿಯರು

ನಗ್ನ ಚಿತ್ರ ಸೆರೆಹಿಡಿದ ಕಿಡಿಗೇಡಿ ಬೆನ್ನಟ್ಟಿ ಹಿಡಿದ ವಿದ್ಯಾರ್ಥಿನಿಯರು

ಬೆಂಗಳೂರು: ಕಾಲೇಜಿನ ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ವಿಡಿಯೋ ತೆಗೆದ ಹಳೆ ವಿದ್ಯಾರ್ಥಿಯನ್ನು ಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ವೈಟ್ಫೀಲ್ಡ್ ನಿವಾಸಿಯಾಗಿರುವ ಯುವಕ ಜಯನಗರ 7ನೇ ಹಂತ ಸಮೀಪದ ಖಾಸಗಿ ಕಾಲೇಜಿನಲ್ಲಿ ಈ ಕೃತ್ಯವೆಸಗಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 17ರಂದು ಕಾಲೇಜಿನ ಮೊದಲ ಮಹಡಿಯಲ್ಲಿರುವ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಮೊಬೈಲ್ ಇಟ್ಟು ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಮುಂದಾಗಿದ್ದಾನೆ. ಮೊಬೈಲ್ ನೋಡಿದ ವಿದ್ಯಾರ್ಥಿನಿಯೊಬ್ಬರು ಜೋರಾಗಿ ಕಿರುಚಾಡಿದ್ದು, ಕೆಲ ವಿದ್ಯಾರ್ಥಿನಿಯರು ಒಳಗೆ ಧಾವಿಸಿ ನೋಡಿದಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನ ಬೆನ್ನಟ್ಟಿ ಹಿಡಿದ ವಿದ್ಯಾರ್ಥಿನಿಯರು ಮೊಬೈಲ್ ಪರಿಶೀಲಿಸಿದಾಗ ಅಶ್ಲೀಲ ಚಿತ್ರಗಳು ಪತ್ತೆಯಾಗಿವೆ. ತಕ್ಷಣವೇ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular