HomeKarnatakaBREAKING: ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

BREAKING: ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಬೆಂಗಳೂರು: ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಕೈದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಹಿಂಡಲಗಾ ಕಾರಾಗೃಹದಿಂದ ಕರೆ ಮಾಡಲಾಗಿತ್ತು. ಕೈದಿಗೆ ಮೊಬೈಲ್ ಯಾರು ಕೊಟ್ಟಿದ್ದರು? ನಂಬರ್ ಹೇಗೆ ಸಿಕ್ಕಿತ್ತು? ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕೇಂದ್ರ ಕಾರಾಗೃಹಗಳಲ್ಲಿ ಜಾಮರ್ ಅಳವಡಿಸಲಾಗುವುದು. ಶೀಘ್ರದಲ್ಲಿಯೇ ಜಾಮರ್ ಅಳವಡಿಕೆಗೆ ಟೆಂಡರ್ ಕರೆಯಲಾಗುವುದು. ಈ ಮೂಲಕ ಜೈಲಿನಲ್ಲಿ ಮೊಬೈಲ್ ಬಳಸುವಂತಹ ಘಟನೆಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular