HomeKarnatakaBREAKING: ಭೋವಿ ನಿಗಮದ ಪ್ರಮುಖ ದಾಖಲಾತಿ ಇದ್ದ ಮೊಬೈಲ್ ಕಳವು: ಅಧಿಕಾರಿ ದೂರು

BREAKING: ಭೋವಿ ನಿಗಮದ ಪ್ರಮುಖ ದಾಖಲಾತಿ ಇದ್ದ ಮೊಬೈಲ್ ಕಳವು: ಅಧಿಕಾರಿ ದೂರು

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಖಾತೆಯಿಂದ ಕೋಟ್ಯಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಪಿ. ಶಿವಸ್ವಾಮಿ ಮೊಬೈಲ್ ಕಳವು ಮಾಡಲಾಗಿದೆ.

ನೆಲಮಂಗಲ ಟೌನ್ ಪೋಲಿಸ್ ಠಾಣೆಗೆ ಸಿ.ಪಿ. ಶಿವಸ್ವಾಮಿ ದೂರು ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ಮೊಬೈಲ್ ಕಳ್ಳತನ ಮಾಡಿರುವ ಶಂಕೆ ಎಂದು ದೂರು ಅವರು ನೀಡಿದ್ದಾರೆ.

ಭೋವಿ ನಿಗಮದ ಅಕ್ರಮದ ಬಗ್ಗೆ ತನಿಖೆ ಲೋಕಾಯುಕ್ತ ಮತ್ತು ಸಿಐಡಿ ತನಿಖೆ ನಡೆಸುತ್ತಿವೆ. ಬೋವಿ ನಿಗಮದ ಪ್ರಮುಖ ದಾಖಲಾತಿ ಮೊಬೈಲ್ ನಲ್ಲಿ ಇವೆ. ಕುಣಿಗಲ್ ಸರ್ಕಲ್ ನಲ್ಲಿ ಬಸ್ ಗೆ ಕಾಯುತ್ತಿದ್ದಾಗ ಮೊಬೈಲ್ ಕಳ್ಳತನ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಮೊಬೈಲ್ ಕದ್ದಿರುವ ಶಂಕೆ ಇದೆ ಎಂದು ದೂರು ನೀಡಿದ್ದಾರೆ. ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular