HomeKarnatakaಮೋದಿ ಪ್ರಧಾನಿಯಾಗಿ ಇಂದಿಗೆ 12 ವರ್ಷ, ಬಿಜೆಪಿ ನಾಯಕರಿಂದ ವಿಶೇಷ ಪೂಜೆ

ಮೋದಿ ಪ್ರಧಾನಿಯಾಗಿ ಇಂದಿಗೆ 12 ವರ್ಷ, ಬಿಜೆಪಿ ನಾಯಕರಿಂದ ವಿಶೇಷ ಪೂಜೆ

ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ರಾಜ್ಯ ಬಿಜೆಪಿ ನಾಯಕರು ನಗರದ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅಂತೆಯೇ ರಾಜ್ಯದ ವಿವಿಧೆಡೆ ದೇವಾಲಯಗಳಲ್ಲಿ ಬಿಜೆಪಿ ನಾಯಕರು, ಚುನಾಯಿತ ಪ್ರತಿನಿಧಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು. ಮಲ್ಲೇಶ್ವರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ, ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಲ್ಲೇಶ್ವರದಲ್ಲಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬನಶಂಕರಿ ದೇವಾಲಯದಲ್ಲಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಂತಿನಗರ ಕೆಂಪಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿ ವಿಶೇಷ ಪೂಜೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 12 ವರ್ಷ ಪೂರೈಸಿದ ಶುಭ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ವಿನೋಬನಗರದ ಶ್ರೀ ಅಬಿಷ್ಟವರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular