HomeKarnatakaಪ್ರವಾಹ , ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಮೋದಿ ಈಗ ಮೇಲಿಂದ ಮೇಲೆ ಬರ್ತಾರೆ-CM ಸಿದ್ದರಾಮಯ್ಯ

ಪ್ರವಾಹ , ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಮೋದಿ ಈಗ ಮೇಲಿಂದ ಮೇಲೆ ಬರ್ತಾರೆ-CM ಸಿದ್ದರಾಮಯ್ಯ

ಬೆಂಗಳೂರು : ಪ್ರವಾಹ , ಬರಗಾಲ ಬಂದಾಗ ಮೋದಿ ರಾಜ್ಯಕ್ಕೆ ಬರಲಿಲ್ಲ, ಈಗ ಮೇಲಿಂದ ಮೇಲೆ ಬರ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ.

ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ. ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ , ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular