HomeKarnatakaಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್

ಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ ಮೋದಿ ಅವರ ಮುಖವಾಡ ಚುನಾವಣಾ ಬಾಂಡ್ ನಲ್ಲಿ ಬಯಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಕುದುರಿಸಾಲವಾಡಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರದ ಬಗ್ಗೆ ರಾಜ್ಯದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ 2014ರಲ್ಲಿ ನೀಡಿದ್ದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. ಅಚ್ಛೇ ದಿನ್ ಬರುತ್ತದೆ ಎಂದು ಂಒದಿ ಹೇಳಿದ್ದರು. ಆದರೆ ಒಳ್ಳೆಯ ದಿನಗಳು ಬರಲೇ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular