ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ.

ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಮೋದಿ ಕನ್ಯಾಕುಮಾರಿಯಲ್ಲಿ ಎರಡು ದಿನ ಧ್ಯಾನ ಮಾಡಿದ್ದಾರೆ. ಧ್ಯಾನ ಅಂತ್ಯಗೊಂಡ ನಂತರ ಅವರು ದೆಹಲಿಗೆ ಆಗಮಿಸಿದ್ದು, ಇಂದು ದೆಹಲಿಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ.

ಸೈಕ್ಲೋನ್ ಪರಿಣಾಮ ಸೇರಿ ಹಲವು ವಿಚಾರಗಳ ಬಗ್ಗೆ ಸಭೆ ನಡೆಸಲಿದ್ದಾರೆ. ಸಭೆಗಳು ಪೂರ್ವ ನಿಗದಿತವಾಗಿದ್ದು, ಅನೇಕ ವಿಚಾರಗಳ ಬಗ್ಗೆ ಸಭೆ ನಡೆಸಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ನಡೆದ ಮತದಾನ, ಚುನಾವಣೋತ್ತರ ಸಮೀಕ್ಷೆಗಳು ಸೇರಿ ಹಲವು ವಿಚಾರಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read