ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಮಧ್ಯಂತರ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ ವಿಚಾರಕ್ಕೆ ಮಧ್ಯಂತರ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ.

‘ಮೋದಿ ಸರ್ ನೇಮ್’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್ ಅರ್ಜಿ ಆದೇಶವನ್ನು ಕಾಯ್ದಿರಿಸಿದೆ.

ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆ ಮತ್ತು ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದು, ಗುಜರಾತ್ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಗಾಂಧಿಯವರ ಮನವಿಯ ಮೇಲೆ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ ಮತ್ತು ಜೂನ್‌ ನಲ್ಲಿ ಬೇಸಿಗೆ ರಜೆಯ ನಂತರ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ.

ಈ ಹಂತದಲ್ಲಿ ಯಾವುದೇ ಮಧ್ಯಂತರ ರಕ್ಷಣೆ ನೀಡಲಾಗುವುದಿಲ್ಲ. ಆದ್ದರಿಂದ, ಬೇಸಿಗೆ ರಜೆಯ ನಂತರದ ಅಂತಿಮ ತೀರ್ಪಿಗೆ ವಿಷಯವನ್ನು ಇರಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಪ್ರಚ್ಚಕ್ ಉಲ್ಲೇಖಿಸಿದ್ದಾರೆ. .

ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿನ ಅಂಶಗಳು ಊಹಾಪೋಹ ಮತ್ತು ಕಾಲ್ಪನಿಕ ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read