ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಇಂದು ಬೆಳಿಗ್ಗೆ 10:55 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು -ಬೆಳಗಾವಿ ವಂದೇ ಭಾರತ್ ಸೇರಿದಂತೆ ದೇಶದಲ್ಲಿ ಒಟ್ಟು ಮೂರು ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.
11:30ಕ್ಕೆ ರೈಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಲಿರುವ ಅವರು ಅರ್.ವಿ. ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ಬೆಳೆಸಲಿದ್ದಾರೆ. 12:55 ಕ್ಕೆ ಎಲೆಕ್ಟ್ರಾನಿಕ್ ಸಿಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಲಿರುವ ಅವರು ಒಂದು ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಮರಳಲಿದ್ದಾರೆ.
ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.…
— Narendra Modi (@narendramodi) August 9, 2025