ನವದೆಹಲಿ: ರಾಜಸ್ಥಾನದ ಬಿಕಾನೇರ್ ವಾಯುನೆಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30ಕ್ಕೆ ಬಿಕಾನೇರ್ ವಾಯುನಲೆಗೆ ಆಗಮಿಸಲಿರುವ ಅವರು ಯೋಧರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರನ್ನು ಉಗ್ರರು ಕೊಂದಿದ್ದರು. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ನಾಶಪಡಿಸಲಾಗಿತ್ತು.
ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಭಾರತೀಯ ಯೋಧರು ನಾಶ ಮಾಡಿದ್ದರು. ನಮ್ಮ ಯೋಧರ ಶಕ್ತಿ ಸಾಮರ್ಥ್ಯ ಧೈರ್ಯ ಕಾರ್ಯವನ್ನು ಮೋದಿ ಶ್ಲಾಘಿಸಲಿದ್ದಾರೆ. ಬಿಕಾನೇರ್ ನಲ್ಲಿ ಯೋಧರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ.