HomeLatest Newsದಾರಿತಪ್ಪಿದ ಮಕ್ಕಳನ್ನು ಶಿಕ್ಷಿಸುವುದಕ್ಕಿಂತ ಸರಿಯಾದ ಮಾರ್ಗದರ್ಶನ ನೀಡಬೇಕು; ತನ್ನನ್ನು ನಿಂದಿಸಿದ ವಿದ್ಯಾರ್ಥಿಗಳ ಬಗ್ಗೆ ನರೇಂದ್ರ ಮೋದಿ...

ದಾರಿತಪ್ಪಿದ ಮಕ್ಕಳನ್ನು ಶಿಕ್ಷಿಸುವುದಕ್ಕಿಂತ ಸರಿಯಾದ ಮಾರ್ಗದರ್ಶನ ನೀಡಬೇಕು; ತನ್ನನ್ನು ನಿಂದಿಸಿದ ವಿದ್ಯಾರ್ಥಿಗಳ ಬಗ್ಗೆ ನರೇಂದ್ರ ಮೋದಿ ಪ್ರತಿಕ್ರಿಯೆ

ನವದೆಹಲಿ- ದ್ವೇಷ ಮತ್ತು ನಿಂದನೆಯಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ದಾರಿ ತಪ್ಪಿದ ಯುವಕರನ್ನು ಶಿಕ್ಷಿಸುವುದಕ್ಕಿಂತ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಸಮಾಜದ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

ತಡರಾತ್ರಿಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ವಿಶಿಷ್ಟವಾದ ಮಾದರಿಯನ್ನು ತೋರಿದ್ದಾರೆ.

ಕ್ಷಮೆ ಮತ್ತು ಸಂಯಮದ ಸಂದೇಶ

ತಮ್ಮ ವಿರುದ್ಧ ಹಾಗೂ ತಮ್ಮ ತಾಯಿಯ ವಿರುದ್ಧ ಬಳಸಿದ ಆಕ್ಷೇಪಾರ್ಹ ಭಾಷೆ ನೋವು ತಂದಿದೆ ಎಂದರೂ, ಕೋಪ ಅಥವಾ ಪ್ರತೀಕಾರದ ಮನೋಭಾವ ತೋರದೇ ಪ್ರಧಾನಿಯವರು ಕ್ಷಮೆ ಮತ್ತು ತಿಳಿವಳಿಕೆಯ ಸಂದೇಶ ಸಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

​”ಬಾಲ್ಯ ಮತ್ತು ಯೌವನದಲ್ಲಿ ತಪ್ಪುಗಳು ಆಗುವುದು ಸಹಜ. ನಾಲಿಗೆ ಹಲ್ಲಿನ ನಡುವೆ ಸಿಕ್ಕಿಬಿದ್ದು ಗಾಯವಾದಾಗ ನಾವು ಹಲ್ಲುಗಳನ್ನು ಮುರಿದುಕೊಳ್ಳುವುದಿಲ್ಲ. ನಾಲಿಗೆ ಮತ್ತು ಹಲ್ಲು ಎರಡೂ ನಮ್ಮದೇ. ಅದೇ ರೀತಿ ಈ ಯುವಕರೂ ನಮ್ಮವರೇ. ಅವರನ್ನು ಸರಿಯಾದ ಹಾದಿಗೆ ತರುವುದು ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಯುವ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂಬುದು ನನ್ನ ಆಶಯ ಎಂದಿದ್ದಾರೆ. ದೇಶದ ಪ್ರಗತಿಯ ಹಾದಿಯಲ್ಲಿ ಯುವಕರೂ ಹೆಜ್ಜೆ ಹಾಕಬೇಕು. ತಪ್ಪುಗಳಿಂದ ಪಾಠ ಕಲಿತು, ಹೊಸದನ್ನು ಕಲಿಯುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದ್ದಾರೆ.

ಜಂತರ್ ಮಂತರ್ ಪ್ರತಿಭಟನೆ ಮತ್ತು ವಿವಾದ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯ ವಿರುದ್ಧ ನಡೆದ ಆಕ್ಷೇಪಾರ್ಹ ಪದಗಳ ಬಳಕೆ ಮಾಡಿದ್ದಾರೆ ಎಂಬ ಆರೋಪದ ಕೇಳಿ ಬಂದಿತ್ತು.

ಯುವಕರ ತಪ್ಪಿಗೆ ಪ್ರತೀಕಾರ ತೀರಿಸಿಕೊಳ್ಳುವ ಬದಲು, ಅವರಿಗೆ ಸರಿಯಾದ ದಾರಿ ತೋರಿಸುವುದು ಹಿರಿಯರ ಕರ್ತವ್ಯ ಎಂದು ಕರೆ ನೀಡಿದ್ದಾರೆ.

​ ವಿವಾದಿತ ಹೇಳಿಕೆ ನೀಡಿದ ನೋಯ್ಡಾ ಮೂಲದ 25 ವರ್ಷದ ರುಚಿಕಾ ಸಿಂಗ್ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ (Paper Leak) ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಆಗ್ರಹಿಸಿ ಯುವಕರು ಪ್ರತಿಭಟನೆ ನಡೆಸಿದ್ದರು. ಆದರೆ, ಈ ಪ್ರತಿಭಟನೆಯ ವೇಳೆ ಕೆಲವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯವರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಆಕ್ರೋಶ ಹೊರಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿತ್ತು.

ಕಾನೂನು ಕ್ರಮ ಮತ್ತು ತನಿಖೆ

ಪ್ರತಿಭಟನಾ ಸಭೆಯಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನೋಯ್ಡಾ ಮೂಲದ 25 ವರ್ಷದ ಯುವತಿ ರುಚಿಕಾ ಸಿಂಗ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಘಾಜಿಯಾಬಾದ್‌ನ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನೋಯ್ಡಾ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗಿದೆ.

​ಪ್ರಸ್ತುತ ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿಗಳ ಆಕ್ರೋಶ ಮತ್ತು ಪ್ರಧಾನಿ ಮೋದಿಯವರ ಈ ವಾದ್ಯಮಯ ಹಾಗೂ ಸಂಯಮದ ಪ್ರತಿಕ್ರಿಯೆಯು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ಪರ-ವಿರೋಧ ಚರ್ಚೆಗಳು ಮುಂದುವರಿದಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular