ಬೆಂಗಳೂರು : ಹಿಂದುಳಿದ ಸಮುದಾಯಗಳ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ಕೊಡುತ್ತಾರೆ ಎನ್ನುವ ಪ್ರಧಾನಿ ಮೋದಿ ಹೇಳಿಕೆ ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ ಸಮುದಾಯಗಳ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ಕೊಡುತ್ತಾರೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಶುದ್ಧ ಸುಳ್ಳು. 1994 ರಿಂದಲೂ ರಾಜ್ಯದಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಇತ್ತು, ಅದೇ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂಬುದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ರಾಜಕೀಯ ಟೀಕೆಗಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎನ್ನುತ್ತಾರೆ. ಬಿಜೆಪಿಯೇ ಆಡಳಿತದಲ್ಲಿ ಇರುವ ಮಣಿಪುರದಲ್ಲಿ ಏನಾಯ್ತು? ಗೃಹ ಸಚಿವರಾದ ಅಮಿತ್ ಶಾ ಅವರು ಗಲಭೆ ನಿಲ್ಲಿಸಿದ್ರಾ? ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಕರ್ನಾಟಕವು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ ಸಮುದಾಯಗಳ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ಕೊಡುತ್ತಾರೆ ಎನ್ನುವ ಪ್ರಧಾನಿ @narendramodi ಅವರ ಹೇಳಿಕೆ ಶುದ್ಧ ಸುಳ್ಳು.
1994 ರಿಂದಲೂ ರಾಜ್ಯದಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಇತ್ತು, ಅದೇ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ.#LiesOfModi pic.twitter.com/w2SzCdmblW— Siddaramaiah (@siddaramaiah) May 23, 2024

