HomeKarnatakaBIG NEWS : 'KSRTC' ಉಪಾಧ್ಯಕ್ಷರಾಗಿ 'ಮಹಮ್ಮದ್ ರಿಜ್ವಾನ್ ನವಾಬ್' ನೇಮಕ : ರಾಜ್ಯ ಸರ್ಕಾರ...

BIG NEWS : ‘KSRTC’ ಉಪಾಧ್ಯಕ್ಷರಾಗಿ ‘ಮಹಮ್ಮದ್ ರಿಜ್ವಾನ್ ನವಾಬ್’ ನೇಮಕ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ, 1950ರ (1950ರ ಕೇಂದ್ರ ಅಧಿನಿಯಮ 64) ಕಲಂ 5ರ ಉಪ ಕಲಂ (2) ಮತ್ತು (3) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಯಮಾವಳಿಗಳು, 1961ರ ನಿಯಮ 3(3)ರಲ್ಲಿ ಪ್ರದತ್ತವಾದ    ಅಧಿಕಾರವನ್ನು ಚಲಾಯಿಸಿ, ಶ್ರೀ ಮಹಮ್ಮದ್ ರಿಜ್ವಾನ್ ನವಾಬ್, ಮಾಜಿ ಸದಸ್ಯರು, ಬೆಂಗಳೂರು ಮಹಾನಗರ ಪಾಲಿಕೆ, ಗುರಪ್ಪನಪಾಳ್ಯ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular