HomeLatest Newsಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ನಾಮನಿರ್ದೇಶನ

ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ನಾಮನಿರ್ದೇಶನ

ನವದೆಹಲಿ: ಕಳೆದ ತಿಂಗಳು ನಡೆದ ಏಕದಿನ ವಿಶ್ವ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೊಹಮ್ಮದ್ ಶಮಿ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಏಕದಿನ ವಿಶ್ವಕಪ್ ನಲ್ಲಿ ಶಮಿ 7 ಪಂದ್ಯಗಳನ್ನಷ್ಟೇ ಆಡಿದ್ದು, 24 ವಿಕೆಟ್ ಕಬ್ಬಳಿಸಿದ್ದರು. ಭಾರತ ತಂಡ ಫೈನಲ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿರುವ ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ ಅವರ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular