ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ ಬಳಿ ಎದುರಿಗೆ ಬರುತ್ತಿದ್ದ ಕಾರ್ ಗೆ ದಾರಿ ಬಿಡಲು ಸೈಡಿಗೆ ಬಂದಿದ್ದು, ಕಬ್ಬಿಣದ ವಾಹನ ಟ್ರಾನ್ಸ್ ಫಾರ್ಮರ್ ಗೆ ತಾಗಿದೆ. ಇದರಿಂದಾಗಿ ವಿದ್ಯುತ್ ಪ್ರವಹಿಸಿ ಇನಾಂದಾರ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಲಗುಂಬಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read