HomeIndiaಮೊಯಿನಾಬಾದ್ ಫಾರ್ಮ್ ಹೌಸ್ ನಲ್ಲಿ ಡ್ರಗ್ಸ್ ಪಾರ್ಟಿ: ಹಾಲಿ ಸಂಸದ, ಮಾಜಿ ಶಾಸಕ ಸೇರಿ 6...

ಮೊಯಿನಾಬಾದ್ ಫಾರ್ಮ್ ಹೌಸ್ ನಲ್ಲಿ ಡ್ರಗ್ಸ್ ಪಾರ್ಟಿ: ಹಾಲಿ ಸಂಸದ, ಮಾಜಿ ಶಾಸಕ ಸೇರಿ 6 ಜನರು ಡ್ರಗ್ಸ್ ಸೇವಿಸಿದ್ದು ಪರಿಕ್ಷೆಯಲ್ಲಿ ದೃಢ

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್​ನಲ್ಲಿ ತಡ ರಾತ್ರಿ ನಡೆದಿದ್ದ ಡ್ರಗ್ಸ್​​ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಾಲಿ ಸಂಸದರು, ಮಾಜಿ ಶಾಸಕರು ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.

ಡ್ರಗ್ಸ್​​ ಪಾರ್ಟಿ ನಡೆಯುತ್ತಿರುವ ಬಗ್ಗೆ ನಿಖರ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿ ಓರ್ವ ಮಹಿಳೆ ಸೇರಿ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ವಶಕ್ಕೆ ಪಡೆದವರಲ್ಲಿ ಹಾಲಿ ಸಂಸದ, ಮಾಜಿ ಶಾಸಕ ಸೇರಿ 6 ಮಂದಿ ರಕ್ತ ಪರೀಕ್ಷೆಯನ್ನು ಮಾಡಲಾಗಿದ್ದು, ಎಲ್ಲರೂ ಡ್ರಗ್ಸ್​ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಎಸ್‌ಪಿ ಗಿರಿಧರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಯಿನಾಬಾದ್​​ನ ಅಜೀಜ್‌ನಗರದಲ್ಲಿರುವ ಮಾಜಿ ಶಾಸಕ ರೋಹಿತ್ ರೆಡ್ಡಿ ಅವರ ಫಾರ್ಮ್‌ಹೌಸ್‌ನಲ್ಲಿ ಈ ಡ್ರಗ್ಸ್​ ಪಾರ್ಟಿ ನಡೆಯುತ್ತಿತ್ತು. ಈ ಬಗ್ಗೆ ಅಧಿಕೃತ ಮೂಲಗಳಿಂದ ಮಾಹಿತಿ ಬಂದಿತ್ತು. ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಪಾರ್ಟಿಯಲ್ಲಿ ಭಾಗಿಯಾದ ಎಲ್ಲರನ್ನು ರ್ಯಾಪಿಡ್​ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಎರ್ರಗಡ್ಡ ಆಸ್ಪತ್ರೆಯಲ್ಲಿ ಮಾದಕ ದ್ರವ್ಯ ಪರೀಕ್ಷೆಗಳನ್ನು ನಡೆಸಲಾಯಿತು. ಅದರಲ್ಲಿ ಸಂಸದ, ಶಾಸಕರ ಪರೀಕ್ಷೆ ಪಾಸಿಟಿವ್ ಎಂದು ತೋರಿಸಿದೆ. ಪಾರ್ಟಿ ನಡೆದ ಫಾರ್ಮ್​​ ಹೌಸ್​ ಮಾಜಿ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರಿಗೆ ಸೇರಿದ್ದಾಗಿದೆ. ಮಾದಕ ದ್ರವ್ಯ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ತೋಟದ ಮನೆಯನ್ನು ಸೀಜ್ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ದೆಹಲಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು, ಇನ್ನೊಬ್ಬ ಉದ್ಯಮಿ ಬಳಿಯಿದ್ದ ಬಂದೂಕಿನಿಂದ ಒಂದು ಸುತ್ತಿನ ಗುಂಡು ಹಾರಿಸಿದ್ದಾರೆ. ಇದರಿಂದ ಅವರನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ. ರಾತ್ರಿ 9:30 ರಿಂದ ಬೆಳಗ್ಗೆ 2 ಗಂಟೆಯವರೆಗೆ ಫಾರ್ಮ್‌ಹೌಸ್ ಶೋಧ ನಡೆದಿದೆ. ಮದ್ಯದ ಬಾಟಲಿಗಳೊಂದಿಗೆ 2 ಗ್ರಾಂ ಡ್ರಗ್ಸ್​ ಅನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular