HomeIndiaSHOCKING : 'ಅಮ್ಮ-ಅಪ್ಪ ಕ್ಷಮಿಸಿ..' NEET ವಿವಾದಗಳ ನಡುವೆ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ‘ಅಮ್ಮ-ಅಪ್ಪ ಕ್ಷಮಿಸಿ..’ NEET ವಿವಾದಗಳ ನಡುವೆ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ!

ಮುಂಬೈ: NEET ಪರೀಕ್ಷೆ ಸುತ್ತಲಿನ ವಿವಾದಗಳು ಮುಂದುವರಿದಿರುವ ನಡುವೆಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ವೈದ್ಯೆಯಾಗುವ ಕನಸು ನನಸಾಗದ ನೋವಿನಿಂದ NEET ಅಭ್ಯರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ಕರ್ಣತ್ ತಾಲ್ಲೂಕಿನ ಜಲಾಲ್‌ಪುರ ಗ್ರಾಮದ ವಿದ್ಯಾರ್ಥಿನಿ ಅಂಕಿತಾ ಸಂಗ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಷಾಢ ಏಕಾದಶಿ ಹಿನ್ನೆಲೆಯಲ್ಲಿ ಆಕೆಯ ತಂದೆ-ತಾಯಿ ಹಾಗೂ ಸಹೋದರ ಪಂಡರ್‌ಪುರಕ್ಕೆ ತೆರಳಿದ್ದ ವೇಳೆ ಅಂಕಿತಾ ಮನೆಯಲ್ಲಿ ಒಬ್ಬಳೇ ಇದ್ದಳು. ಸಂಜೆ ಸುಮಾರು 5.30ರ ವೇಳೆಗೆ ಸಂಬಂಧಿಕರು ಮನೆಗೆ ಬಂದಾಗ ಆಕೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ನಡೆಸಿದ ವೇಳೆ, ಅಂಕಿತಾ ಬರೆದಿದ್ದಾಳೆ ಎನ್ನಲಾದ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಅದರಲ್ಲಿ NEET ಮರುಪರೀಕ್ಷೆಯಲ್ಲಿ ನಿರೀಕ್ಷಿತ ಅಂಕಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯೆಯಾಗುವ ನನ್ನ ಕನಸು ನನಸಾಗಲಿಲ್ಲ ಎಂದು ಮನನೊಂದು ಬರೆದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರದಲ್ಲಿ, “ಅಮ್ಮಾ-ಅಪ್ಪಾ, ನನ್ನಿಗಾಗಿ ನೀವು ತುಂಬಾ ಕಷ್ಟಪಟ್ಟಿದ್ದೀರಿ. ಆದರೆ ನಿಮ್ಮ ಕನಸನ್ನು ನನಸು ಮಾಡಲಾಗಲಿಲ್ಲ. ಅಣ್ಣಾ, ಅಮ್ಮಾ-ಅಪ್ಪನನ್ನು ಚೆನ್ನಾಗಿ ನೋಡಿಕೋ. ನಾನು ಏನಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸಿ” ಎಂದು ಭಾವುಕವಾಗಿ ಬರೆದಿದ್ದಾಳೆ. ಅಂಕಿತಾಗೆ NEET ಮರುಪರೀಕ್ಷೆಯಲ್ಲಿ 166 ಅಂಕಗಳು ಬಂದಿದ್ದು, ಕಟ್‌ಆಫ್ 177 ಅಂಕಗಳು ಆಗಿತ್ತು. ಕೇವಲ 11 ಅಂಕಗಳ ಅಂತರದಿಂದ ಆಕೆ ಕಟ್‌ಆಫ್ ತಪ್ಪಿಸಿಕೊಂಡಿದ್ದಳು.ತಾನು ಕೇವಲ ಸಾಮಾನ್ಯ ವಿದ್ಯಾರ್ಥಿನಿ, ಕುಟುಂಬದ ನಿರೀಕ್ಷೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾಳೆ. ತನ್ನ ಸಾವಿಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಬಾರದು ಎಂದು ಸಹ ಮನವಿ ಮಾಡಿದ್ದಾಳೆ.

ಕರ್ಣತ್ ಪೊಲೀಸರು ಈ ಪ್ರಕರಣವನ್ನು ಅಸಹಜ ಸಾವು ಎಂದು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ದುರ್ಘಟನೆ ಮಹಾರಾಷ್ಟ್ರದಾದ್ಯಂತ ತೀವ್ರ ಆಘಾತಕ್ಕೆ ಕಾರಣವಾಗಿದೆ. ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂತಾಪ ಸೂಚಿಸಿ, ಯಾವುದೇ ಪರಿಸ್ಥಿತಿಯಲ್ಲೂ ವಿದ್ಯಾರ್ಥಿಗಳು ವೈಫಲ್ಯದಿಂದ ಕುಗ್ಗಬಾರದು, ಭರವಸೆ ಕಳೆದುಕೊಳ್ಳದೆ ಕುಟುಂಬದ ಬಗ್ಗೆ ಯೋಚಿಸಿ ಜೀವನವನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular