HomeLatest Newsಮನಿ ಡಬ್ಲಿಂಗ್ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಹಣ ಪಡೆದ ಆರೋಪಿ ಪರಾರಿ: ಕುಟುಂಬದಿಂದಲೇ ನಾಪತ್ತೆ...

ಮನಿ ಡಬ್ಲಿಂಗ್ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಹಣ ಪಡೆದ ಆರೋಪಿ ಪರಾರಿ: ಕುಟುಂಬದಿಂದಲೇ ನಾಪತ್ತೆ ಕೇಸ್ ದಾಖಲು

ಬಳ್ಳಾರಿ: ಚೀಟಿ ಹೆಸರಲ್ಲಿ ಹಣ ಡಬ್ಲಿಂಗ್ ಮಾಡಿಕೊಡುವುದಾಗಿ ಹೇಳಿ ನೂರಾರು ಕುಟುಂಬಗಳಿಂದ ಹಣ ಪಡೆದ ವ್ಯಕ್ತಿಯೊಬ್ಬ ಪರಾರಿಯಾಗಿದ್ದು, ವಿಚಿತ್ರವೆಂದರೆ ಆತನ ಮನೆಯವರೇ ಆತನ ವಿರುದ್ಧ ನಾಪತ್ತೆ ಕೇಸ್ ದಾಖಲಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಂಚಕನ ಮಾತು ನಂಬಿ ಹಣ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುವ ಸ್ಥಿತಿ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ವ್ಯಕ್ತಿ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಿದ್ದಾನೆ. ನೂರಾರು ಕೋಟಿ ಹಣ ಸಂಗ್ರಹಿಸಿಕೊಂಡ ವೆಂಕಟೇಶ್ ನಾಪತ್ತೆಯಾಗಿದ್ದಾನೆ. ಒಬ್ಬರಿಂದ 10 ಸಾವಿರ ರೂಪಾಯಿಯಿಂದ ಹಿಡಿದು 1 ಕೋಟಿ ರೂಪಾಯಿ ವರೆಗೆ ಹಣ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಹಣ ಕಳೆದುಕೊಂಡವರು ವೆಂಕಟೇಶ್ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಣ ಕಳೆದುಕೊಂಡವರಲ್ಲಿ ಟೀ ಅಂಗಡಿ ನಡೆಸುವವರು, ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿದ್ದಾರೆ. ಮಕ್ಕಳ ಶಿಕ್ಷಣ, ಮಗಳ ಮದುವೆ, ಮನೆ ನಿರ್ಮಾಣ, ಹೋಟೆಲ್ ಆರಂಭಿಸುವ ಕನಸು ಸೇರಿದಂತೆ ವಿವಿಧ ಉದ್ದೇಶಗಳಿಗೆ ವರ್ಷಗಳ ಕಾಲ ದುಡಿದು ಕೂಡಿಸಿದ ಹಣವನ್ನು ಚೀಟಿ ರೂಪದಲ್ಲಿ ಹೂಡಿಕೆ ಮಾಡಿದ್ದರು.

ಹಣ ಪಡೆದ ವೆಂಕಟೇಶ ಕಳೆದ ತಿಂಗಳು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಇದುವರೆಗೆ ಆತನ ಸುಳಿವು ಪತ್ತೆಯಾಗಿಲ್ಲ. ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ.

ಇನ್ನೊಂದು ವಿಚಿತ್ರ ಸಂಗತಿಯೆಂದರೆ ವೆಂಕಟೇಶ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ. ಇದರಿಂದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ. ಕೋಟೀ ಕೋಟಿ ಹಣ ಸಂಗ್ರಹಿಸಿಕೊಂಡು ವ್ಯಕ್ತಿ ನಾಪತ್ತೆಯಾಗಿದ್ದು, ಹಣ ಕಳೆದುಕೊಂಡವರು ಕಂಗಾಲಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular