ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಮಗಳು ಮೋನಿಷಾ ಇತ್ತೀಚೆಗೆ ಮಾಡಿಸಿರುವ ಹೊಸ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೆಂಪು ಬಣ್ಣದ ಉಡುಪಿನಲ್ಲಿ ಅತ್ಯಂತ ಗ್ಲಾಮರಸ್ ಹಾಗೂ ಮುದ್ದಾಗಿ ಕಾಣಿಸಿಕೊಂಡಿರುವ ಮೋನಿಷಾ ವಿಜಯ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಈ ವಿಭಿನ್ನ ಲುಕ್ ನೋಡಿ ನೆಟ್ಟಿಗರು ಫಿದಾ ಆಗಿದ್ದು ಕ್ಯೂಟ್ ಮತ್ತು ಗಾರ್ಜಿಯಸ್ ಎಂದು ಬಗೆಬಗೆಯ ಕಾಮೆಂಟ್‌ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಸಿನಿಮಾರಂಗದ ವಿಚಾರಕ್ಕೆ ಬಂದರೆ ಮೋನಿಷಾ ವಿಜಯ್ ಕುಮಾರ್ ಅಭಿನಯದ ಚೊಚ್ಚಲ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿರುವ ಸಿಟಿ ಲೈಟ್ಸ್ ಚಿತ್ರದಲ್ಲಿ ಮೋನಿಷಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾವನ್ನು ಸ್ವತಃ ದುನಿಯಾ ವಿಜಯ್ ಅವರೇ ನಿರ್ದೇಶನ ಮಾಡಿದ್ದು, ಈಗಾಗಲೇ ಸಿನಿಪ್ರಿಯರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾ ಮುಂಬರುವ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

