HomeKarnatakaಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಮೋಡಗಳು ಸೃಷ್ಟಿಯಾಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಕೆಲವೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular