HomeKarnatakaMonsoon Rain : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ

Monsoon Rain : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. ಜೂನ್ 10ರ ಬಳಿಕ ಮುಂಗಾರು ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 1 ವಾರ ಭಾರಿ ಮಳೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ

ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular