ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂನ್ 15 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಮುಂದಿನ 48 ಗಂಟೆ ಬೆಂಗಳೂರಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಮಿಂಚು ಸಹಿತ ಮಳೆ ಆಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

