HomeIndiaದೇಶದ ಕೃಷಿ, ಆರ್ಥಿಕತೆಯ ಜೀವನಾಡಿ 'ಮುಂಗಾರು ಮಳೆ' ಬಗ್ಗೆ ಹವಾಮಾನ ಇಲಾಖೆ ಸಿಹಿ ಸುದ್ದಿ

ದೇಶದ ಕೃಷಿ, ಆರ್ಥಿಕತೆಯ ಜೀವನಾಡಿ ‘ಮುಂಗಾರು ಮಳೆ’ ಬಗ್ಗೆ ಹವಾಮಾನ ಇಲಾಖೆ ಸಿಹಿ ಸುದ್ದಿ

ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ 31ರ ವೇಳೆಗೆ ಕೇರಳಕ್ಕೆ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ನೈರುತ್ಯ ಮುಂಗಾರು ಮೇ 31ರ ವೇಳೆಗೆ ದಕ್ಷಿಣದ ಕೇರಳ ಪ್ರವೇಶಿಸುವ ಸಂಭವ ಇದೆ. ಈ ದಿನಾಂಕದಲ್ಲಿ 4 ದಿನ ಹಿಂದೆ ಮುಂದೆ ಆಗಬಹುದು. ಈ ಬಾರಿ ಮುಂಚಿತವಾಗಿ ಮುಂಗಾರು ಪ್ರವೇಶಿಸುತ್ತಿಲ್ಲ. ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಪ್ರವೇಶಿಸುತ್ತದೆ. ಅದೇ ವೇಳೆಗೆ ಈ ಬಾರಿ ಮುಂಗಾರು ಆಗಮನವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ – ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ಮಳೆ ತರುವ ಮುಂಗಾರು ಮಾರುತಗಳು ಈ ಬಾರಿ ದೀರ್ಘಕಾಲಿನ ಸರಾಸರಿಗಿಂತ ಹೆಚ್ಚಿನ ಮಳೆ ತರಬಹುದು ಎಂದು ಹವಾಮಾನ ಇಲಾಖೆ ಕಳೆದ ತಿಂಗಳು ತಿಳಿಸಿತ್ತು.

ದೇಶದ ವಾರ್ಷಿಕ ಮಳೆಯ ಬಹುಪಾಲು ನೈರುತ್ಯ ಮಾನ್ಸೂನ್ ಮಾರುತಗಳು ತರುತ್ತವೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ಮುಂಗಾರು ಮಹತ್ವದ್ದಾಗಿದೆ. ಕಳೆದ ವರ್ಷ ಜೂನ್ 8ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಿದ್ದವು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular