ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಿದ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ಮೇ 24 ರಂದು ಅಧಿಕೃತವಾಗಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮೇ 25 ರ ಭಾನುವಾರ ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.
ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.