HomeKarnatakaಮುಂಗಾರು ಮಳೆ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಮುಂದಿನ ವಾರ ಮಾನ್ಸೂನ್ ಪ್ರವೇಶ: ರಾಜ್ಯದಲ್ಲಿ ಈ ಬಾರಿ...

ಮುಂಗಾರು ಮಳೆ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ: ಮುಂದಿನ ವಾರ ಮಾನ್ಸೂನ್ ಪ್ರವೇಶ: ರಾಜ್ಯದಲ್ಲಿ ಈ ಬಾರಿ ಹೆಚ್ಚು ಮಳೆ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಆಗಮಿಸಲಿರುವ ಮುಂಗಾರು ಜೂನ್ ಮೊದಲ ವಾರ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 31 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸಲಿದೆ. ನಂತರ ರಾಜ್ಯಕ್ಕೆ ಪ್ರವೇಶಿಸಲು ಒಂದು ವಾರ ಬೇಕು. ಸಾಮಾನ್ಯವಾಗಿ ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗುತ್ತದೆ. ಈ ವರ್ಷ ಕೂಡ ಒಂದೆರಡು ದಿನ ಹೆಚ್ಚು ಕಡಿಮೆ ಇದೆ ಅವಧಿಯಲ್ಲಿ ಮುಂಗಾರು ಶುರುವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 1ರಿಂದ 3ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 28ರಿಂದ 31ರವರೆಗೆ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.

ನೈರುತ್ಯ ಮುಂಗಾರು ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದ್ದು, ಜೂನ್ ನಿಂದ ಸೆಪ್ಟೆಂಬರ್ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆ ಆಗಲಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular