HomeKarnatakaಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದು, ರೌತರು, ಜನರು ಸಾಂಕಷ್ಟಕ್ಕೆ ಎದುರಾಗಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.

ಈನಡುವೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular