HomeAgricultureರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ.

ಬಂಗಾಳ ಕೊಲ್ಲಿಯಲ್ಲಿ ಕೆಲದಿನಗಳ ಹಿಂದೆ ರಚನೆಯಾದ ಮೋಖಾ ಚಂಡ ಮಾರುತದಿಂದ ಮುಂಗಾರು ಆರಂಭಕ್ಕೆ ಉತ್ತಮ ವಾತಾವರಣ ನಿರ್ಮಾಣಗೊಳ್ಳುವಾಗುತ್ತಿದೆ. ನಿರೀಕ್ಷೆಯಂತೆ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ ನಿಂದ ಮುಂಗಾರು ಆರಂಭವಾಗಲಿದೆ. ಮುಂಗಾರಿನಲ್ಲಿ ಶೇಕಡ 70ರಿಂದ 80ರಷ್ಟು ಮುಂಗಾರು ಮಳೆಯಾಗಲಿದ್ದು, ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಈ ಬಾರಿಯೂ ಉತ್ತಮ ಮಳೆ ಆಗಲಿದೆ. ಈ ಬಾರಿ 90ರಷ್ಟು ಮಳೆಯಾಗಲಿದ್ದು, ಜೂನ್ ಮೊದಲ ವಾರ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ನಂತರದ ನಾಲ್ಕು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular