HomeLatest Newsರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಹೊರತುಪಡಿಸಿ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ದುರ್ಬಲವಾಗಿರುತ್ತದೆ ಎಂದು ಹೇಳಿದೆ. ಭಾನುವಾರ ಕರಾವಳಿಯಲ್ಲಿ ಸಾಧಾರಣ ಮತ್ತು ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. ಜೂನ್ 23 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುತ್ತದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. ಜೂನ್ 27, 28 ರಂದು ರಾಜ್ಯದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular