HomeKarnatakaRain Alert Karnataka : ಜುಲೈ 12 ರಿಂದ ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದೆ 'ಮುಂಗಾರು'...

Rain Alert Karnataka : ಜುಲೈ 12 ರಿಂದ ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದೆ ‘ಮುಂಗಾರು’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಜುಲೈ 12 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ವಾರ ಭಾರೀ ಮಳೆಯಿಂದ ತತ್ತರಿಸಿದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಿಂದ ಮಳೆ ಪ್ರಮಾಣ ತಗ್ಗಿದೆ. ಆದರೆ ಶುಕ್ರವಾರದಿಂದ ಮತ್ತೆ ಮುಂಗಾರು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ.

ಕಳೆದ ಕೆಲವು ವಾರಗಳಿಂದ ದಕ್ಷಿಣ ಕನ್ನಡ, ಚಿಕ್ಕಮಗಳೂರು. ಉತ್ತರ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಕಡೆ ಭರ್ಜರಿಯಾಗಿ ಮಳೆಯಾಗುತ್ತಿದೆ. ಜೂನ್ ಆರಂಭದಲ್ಲಿ ಸುಮ್ಮನಿದ್ದ ವರುಣ ಜುಲೈ 15 ರ ಬಳಿಕ ಧೋ ಎಂದು ಮಳೆ ಸುರಿಸುತ್ತಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular