ಬೆಂಗಳೂರು: ಮೊಂಥಾ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳಿನಾಡು, ಪಾಂಡಿಚೆರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬೆಂಗಳೂರು, ಹಾವೇರಿ, ಧಾರವಾಡ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
