ಮಳೆ ಆಶ್ರಯಕ್ಕೆ ನಿಂತಿದ್ದ ವಿದ್ಯಾರ್ಥಿಗಳಿಗೆ ಆಘಾತ ; ಮೊರಾದಾಬಾದ್ ವಿವಿಯಲ್ಲಿ ಮಿಂಚಿನ ದುರಂತ | Shocking Video

ಉತ್ತರ ಪ್ರದೇಶದ ಮೊರಾದಾಬಾದ್‌ನ ತೀರ್ಥಂಕರ್ ಮಹಾವೀರ್ ವಿಶ್ವವಿದ್ಯಾಲಯದ ಆವರಣದಲ್ಲಿ ಮಳೆರಾಯನ ಅಟ್ಟಹಾಸಕ್ಕೆ ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಭಾರಿ ಮಳೆ ಸುರಿಯುತ್ತಿದ್ದ ಕಾರಣ ಮರದ ಕೆಳಗೆ ಆಶ್ರಯ ಪಡೆದಿದ್ದ ವಿದ್ಯಾರ್ಥಿಗಳ ಮೇಲೆ ಮಿಂಚು ಎರಗಿದೆ. ಈ ಭಯಾನಕ ಕ್ಷಣಗಳು ಕ್ಯಾಂಪಸ್‌ನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಏಪ್ರಿಲ್ 10 ರಂದು ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮಿಂಚಿನ ತೀವ್ರತೆಗೆ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಕ್ಯಾಂಪಸ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಇತರ ವಿದ್ಯಾರ್ಥಿಗಳು ಗಾಯಗೊಂಡವರಿಗೆ ಸಹಾಯ ಮಾಡಲು ಧಾವಿಸಿದರು. ಸದ್ಯಕ್ಕೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read