BIG NEWS: ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ

ಕರ್ನಾಟಕದಲ್ಲಿ ಈ ಹಿಂದೆ ಆರಂಭವಾಗಿದ್ದ ಬುರ್ಖಾ ವಿವಾದ ನ್ಯಾಯಾಲಯದ ತೀರ್ಪಿನ ಬಳಿಕ ತಣ್ಣಗಾಗಿದ್ದು, ಇದೀಗ ಉತ್ತರ ಪ್ರದೇಶದ ಕಾಲೇಜ್ ಒಂದರಲ್ಲಿ ಮತ್ತೆ ಸದ್ದು ಮಾಡಿದೆ. ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಬಳಿಕ ಅವರುಗಳು ಧರಣಿ ನಡೆಸಿದ್ದಾರೆ.

ಮೊರಾದಾಬಾದ್ ನಗರದ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಬುಧವಾರದಂದು ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದರು. ಆಗ ಕಳೆದ ವರ್ಷವೇ ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ಅದನ್ನು ಮೀರಿ ಬೇರೆ ವಸ್ತ್ರ ಧರಿಸಿ ಬರುವವರಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿ ಹೇಳಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಬುರ್ಖಾ ಧರಿಸುವುದು ನಮ್ಮ ಹಕ್ಕು ಎಂದು ಹೇಳಿ ಕಾಲೇಜಿನ ಗೇಟಿನ ಬಳಿ ಧರಣಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಸಮಾಜವಾದಿ ಪಕ್ಷದ ಮುಖಂಡರು ವಿದ್ಯಾರ್ಥಿನಿಯರ ಬೇಡಿಕೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read