ಚಿಕ್ಕಬಳ್ಳಾಪುರ : ಜಿಲ್ಲಾ ಕೇಂದ್ರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿ (Moral Policing) ತಲೆ ಎತ್ತಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಕೃತ್ಯ ಎಸಗಿದವರು ಇಬ್ಬರು ಅನ್ಯಕೋಮಿ ಅಪ್ರಾಪ್ತರು ಎಂಬುದು ಆಘಾತಕಾರಿ ವಿಷಯವಾಗಿದೆ.
ಘಟನೆಯ ವಿವರ
ಚಿಕ್ಕಬಳ್ಳಾಪುರ ನಗರದ ರಸ್ತಯಲ್ಲಿ ಯುವಕ ಮತ್ತು ಯುವತಿ (ವಿದ್ಯಾರ್ಥಿಗಳು) ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಇಬ್ಬರು ಅನ್ಯಕೋಮಿನ ಅಪ್ರಾಪ್ತ ಹುಡುಗರು, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.ವಿದ್ಯಾರ್ಥಿಗಳನ್ನು ತಡೆದ ಅಪ್ರಾಪ್ತರುನೀವಿಬ್ಬರು ಯಾರು? ಎಲ್ಲಿಗೆ ಹೋಗುತ್ತಿದ್ದೀರಿ?” ಎಂದು ಪ್ರಶ್ನಿಸಿ ಕಿರಿಕ್ ಮಾಡಿದ್ದಾರೆ.
ಕಿರುಕುಳಕ್ಕೆ ಒಳಗಾದ ಯುವಕ ಮತ್ತು ಯುವತಿ, “ನಾವಿಬ್ಬರು ಒಂದೇ ಊರಿನವರು, ನಮಗೆ ಪರಿಚಯವಿದೆ” ಎಂದು ಸ್ಪಷ್ಟಪಡಿಸಿದರೂ ಸಹ ಅಪ್ರಾಪ್ತರು ಬಿಡದೆ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ.ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿದ ಚಿಕ್ಕಬಳ್ಳಾಪುರ ನಗರ ಠಾಣೆಯ ಪೊಲೀಸರು, ನೈತಿಕ ಪೊಲೀಸ್ಗಿರಿ ನಡೆಸಿದ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಂತಹ ಪ್ರವೃತ್ತಿಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

