ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ.
ಪಾರ್ಕ್ ನಲ್ಲಿ ಮುಸ್ಲಿಂ ಯುವತಿ, ಹಿಂದೂ ಯುವಕ ಕುಳಿತಿದ್ದ ವೇಳೆ ಸ್ಥಳಕ್ಕಾಗಮಿಸಿದ ಯುವಕರ ಗುಂಪು, ಯುವತಿಗೆ ಬುರ್ಖಾ ತೆಗೆ, ಹೆಸರೇನು ಹೇಳು ಎಂದು ಆವಾಜ್ ಹಾಕಿದ್ದಾರೆ. ಯುವಕನಿಗೂ ಬೈದು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲಿ ವಿಡಿಯೋ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.