HomeKarnatakaBREAKING : ಬೆಂಗಳೂರಲ್ಲಿ ನೈತಿಕ ಪೊಲೀಸ್‌ಗಿರಿ; ಯುವತಿ ಜೊತೆ ಕುಳಿತಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ,...

BREAKING : ಬೆಂಗಳೂರಲ್ಲಿ ನೈತಿಕ ಪೊಲೀಸ್‌ಗಿರಿ; ಯುವತಿ ಜೊತೆ ಕುಳಿತಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರು ಅರೆಸ್ಟ್.!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ನೈತಿಕ ಪೊಲೀಸ್‌ಗಿರಿಯ ಘಟನೆ ನಡೆದಿದ್ದು,ಯುವತಿ ಜೊತೆ ಕುಳಿತಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿಯ ಪ್ರಕಾರ, ಅರವಿಂದ್ ಭಾರದ್ವಾಜ್ ಎಂಬ ಯುವಕ ತನ್ನ ಮಹಿಳಾ ಸ್ನೇಹಿತೆಯೊಂದಿಗೆ ಬಾಶೆಟ್ಟಿಹಳ್ಳಿ ಪ್ರದೇಶದಲ್ಲಿ ಕಾರು ನಿಲ್ಲಿಸಿ ಕುಳಿತಿದ್ದ ವೇಳೆ ಕೆಲವರು ಅಲ್ಲಿಗೆ ಬಂದು, “ಇಲ್ಲಿ ಯಾಕೆ ಕುಳಿತಿದ್ದೀರಿ?” ಎಂದು ಪ್ರಶ್ನಿಸಿ ಗಲಾಟೆ ಆರಂಭಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅರವಿಂದ್ ಹಾಗೂ ಯುವತಿ ಅಲ್ಲಿಂದ ಕಾರಿನಲ್ಲಿ ತೆರಳಲು ಮುಂದಾಗಿದ್ದಾರೆ. ಆದರೆ ಈ ಸಂದರ್ಭ ಅರವಿಂದ್ ಅವರ ಕಾರು ಸ್ಥಳೀಯರೊಬ್ಬರ ಬೈಕ್‌ಗೆ ತಗುಲಿದ್ದು, ಇದರಿಂದ ಆಕ್ರೋಶಗೊಂಡ ಕೆಲವರು ಸಿಮೆಂಟ್ ಇಟ್ಟಿಗೆಯಿಂದ ಕಾರಿನ ಮೇಲೆ ಹಾಗೂ ಅರವಿಂದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲ್ಲೆಯಲ್ಲಿ ಗಾಯಗೊಂಡ ಅರವಿಂದ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹರ್ಷ, ಭರತ್, ಸಂದೀಪ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಸಾಂದರ್ಭಿಕ AI ಚಿತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular