HomeKarnataka'ವಸತಿ ಶಾಲೆ' ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದ್ದು, ಹೀಗಾಗಿ ಈ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಈ ವಿಷಯ ತಿಳಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದಿದ್ದಾರೆ

ಇದರಿಂದಾಗಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular