HomeKarnatakaಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ: DRM ಮುದಿತ್ ಮಿತ್ತಲ್

ಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ: DRM ಮುದಿತ್ ಮಿತ್ತಲ್

ರಿಪ್ಪನ್‌ ಪೇಟೆ: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಿಲ್ದಾಣದ ಆವರಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ವೀಕ್ಷಿಸಿದರು.

ಅರಸಾಳು ರೈಲ್ವೆ ನಿಲ್ದಾಣದಲ್ಲಿನ ಶುಚಿತ್ವ, ಕುಡಿಯುವ ನೀರು, ನಿರ್ವಹಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುದಿತ್ ಮಿತ್ತಲ್, ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 ಅತೀ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿರುವ ಅರಸಾಳು ನಿಲ್ದಾಣ ಮತ್ತು ಮಾಲ್ಗುಡಿ ಮ್ಯೂಸಿಯಂನಲ್ಲಿ ಸಮರ್ಪಕ ನಿರ್ವಹಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ,ಮ್ಯೂಸಿಯಂ ಅಭಿವೃದ್ಧಿಗೆ ರೈಲ್ವೆ ಇಲಾಖೆ ಹೆಚ್ಚಿನ ಆದ್ಯತೆ ನೀಡದಿರುವುದಕ್ಕೆ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗಾಗಿ ಅಗತ್ಯ ಹೆಚ್ಚಿನ ಅನುದಾನದ ಬೇಡಿಕೆಯನ್ನು ಈಗಾಗಲೇ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಬಳಿಕ ಮ್ಯೂಸಿಯಂ ಅನ್ನು ಅಗತ್ಯ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲ್ವೆ ಇಲಾಖೆಯ ಮುಖ್ಯ ಕಾರ್ಯ ರೈಲುಗಳ ಸಂಚಾರವನ್ನು ನಿರ್ವಹಿಸುವುದಾಗಿದೆ. ಸೇರಿದಂತೆ ಇತರೆ ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯ ಸರ್ಕಾರಗಳು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಚಿಂತಿಸಿ ಕ್ರಮ ಕೈಗೊಳ್ಳಬೇಕು ಇಲಾಖೆಯು ಸಹಕರಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.

 ನಂತರ ಅರಸಾಳು ರೈಲ್ವೆ ನಿಲ್ದಾಣದ ಪರಿಶೀಲಿಸಿದ ಮುದಿತ್ ಮಿತ್ತಲ್, ನಿಲ್ದಾಣದಲ್ಲಿರುವ ‘ಮಾಲ್ಗುಡಿ ಚಾಯ್’ ಕೇಂದ್ರಕ್ಕೆ ಭೇಟಿ ನೀಡಿ ಚಹಾ ಸವಿದರು.

ಈ ಸಂಧರ್ಭದಲ್ಲಿ ರೇಲ್ವೆ ಇಲಾಖೆಯ ಆರ್.ಪಿ.ಎಫ್ ಉಸ್ತುವಾರಿ ಕೊಂಡ ರೆಡ್ಡಿ, ಜಗದೀಶ್, ಮೂರ್ತಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular