ಮತ್ತಷ್ಟು ಜನಸ್ನೇಹಿ ಆದ ಪೊಲೀಸ್ ಇಲಾಖೆ : ಇನ್ಮುಂದೆ `QR’ ಕೋಡ್ ಸ್ಕ್ಯಾನ್ ಮಾಡಿ ದೂರು ನೀಡಬಹುದು!

ಬೆಂಗಳೂರು : ಪೊಲೀಸ್ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಮಹತ್ವದ ಕ್ರಮ ಕೈಗೊಂಡಿದೆ.

ಹೌದು. ಸಾರ್ವಜನಿಕರು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಹಿಂಜರಿಯುವುದು ಸಾಮಾನ್ಯ. ಹಾಗಾಗಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ‘ ಲೋಕ ಸ್ಪಂದನ’ ಎಂಬ ಕ್ಯೂ ಆರ್ ಕೋಡ್ ಆ್ಯಪ್ ಗಳನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಇದನ್ನು ಸ್ಕ್ಯಾನ್ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.

ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಟ್ವೀಟ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ. QR ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿದೆ. ಇದರಿಂದ ನಾವು ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read