ಹೊಸಪೇಟೆ(ವಿಜಯನಗರ ಜಿಲ್ಲೆ): ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೇವಿನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಇ. ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹರಪನಹಳ್ಳಿ, ಅಲವಾಗಲು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ನಂತರ ಮಕ್ಕಳು ಚೇತರಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ಹೇಳಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.