HomeKarnatakaಯಾವುದೇ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್; 250 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ: ನೋಂದಣಿಗೆ...

ಯಾವುದೇ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್; 250 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ: ನೋಂದಣಿಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ ಮೊದಲನೇ ವಾರದಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular