ವಿಜಯಪುರ : ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬ್ಯಾಲಿಹಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಮಂದಿಗೆ ವಾಂತಿ , ಭೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗ್ರಾಮ ಪಂಚಾಯಿತಿಯಿಂದ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಹಲವರನ್ನು ಬಸವನ ಬಾಗೇವಾಡಿ ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.