BIG NEWS : ರಾಜ್ಯದಲ್ಲಿ ಖಾಲಿ ಇರುವ ಐದೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ರಾಜ್ಯದಲ್ಲಿ ಖಾಲಿ ಇರುವ 5 ಲಕ್ಷಕ್ಕೂ ಹೆಚ್ಚು  ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎ ಸಿದ್ದರಾಮಯ್ಯ ವಿವಿಧ ಇಲಾಖೆಗಳಲ್ಲಿನ 5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಆರು ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದರು. 40% ಕಮಿಷನ್ ಆರೋಪ , ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್ ಅವ್ಯವಹಾರ, ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಕೂಡ ಮರು ತನಿಖೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆ ಗೋಲ್ಮಾಲ್, PSI ನೇಮಕಾತಿ ಹಗರಣ, ಕೋವಿಡ್ ಸಲಕರಣೆ ಖರೀದಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, BDA, BBMP ಅಕ್ರಮಗಳು ಸೇರಿ ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೂವರು ಸಾಧಕರಿಗೆ ‘ಕೆಂಪೇಗೌಡ ಪ್ರಶಸ್ತಿ’ ಪ್ರಧಾನ ಮಾಡಿದ ಡಿಸಿಎಂ ಡಿಕೆಶಿ

ಬೆಂಗಳೂರು : ಕೆಂಪೇಗೌಡ ಜಯಂತಿಯಂದು ( ಜೂ.27) ಇಂದು ಮೂವರು ಸಾಧಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋಧ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read