ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆ : ಎಚ್ಚರಿಕೆ ಸಂದೇಶ ರವಾನಿಸಿದ ಸಿಎಂ

ಬೆಂಗಳೂರು : ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಲ್ಲೇ 4 ಸಾವಿರ ಅಧಿಕ ಕೇಸ್ ಪತ್ತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.
ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ  ಎಂದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

https://twitter.com/CMofKarnataka/status/1701095528736718905

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read