HomeLatest Newsಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕಾರವಾರ: ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನ ಪಂಚವಟಿಯಲ್ಲಿರುವ ಶಾಲೆಯಲ್ಲಿ ಫೆಬ್ರವರಿ 4ರಂದು 518 ಮಕ್ಕಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದರು. ಈ ಪೈಕಿ 70 ಮಕ್ಕಳಿಗೆ ಜ್ವರ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು, ಅಸ್ವಸ್ಥ ಮಕ್ಕಳನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆರೋಗ್ಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಪರೀಕ್ಷೆ ನಡೆಸಿದೆ. ಸ್ಯಾಂಪಲ್ ಪಡೆದು ಬೆಳಗಾವಿ ಲ್ಯಾಬ್ ಗೆ ಅಧಿಕಾರಿಗಳು ಕಳುಹಿಸಿದ್ದಾರೆ. ಇನ್ನೂ 8 ಶಾಲಾ ಮಕ್ಕಳಲ್ಲಿ ಜ್ವರ ಮತ್ತು ವಾಂತಿ ಲಕ್ಷಣಗಳಿವೆ. ಎಲ್ಲಾ ಮಕ್ಕಳಿಗೆ ಆರೋಗ್ಯ ಅಧಿಕಾರಿಗಳ ತಂಡ ಪರೀಕ್ಷೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular