HomeIndiaBREAKING: AAP ನಾಯಕರಿಗೆ ಬಿಗ್ ಶಾಕ್: 1300 ಕೋಟಿ ರೂ. ಹಗರಣದಲ್ಲಿ ಮನೀಷ್ ಸಿಸೋಡಿಯಾ, ಸತ್ಯೇಂದರ್...

BREAKING: AAP ನಾಯಕರಿಗೆ ಬಿಗ್ ಶಾಕ್: 1300 ಕೋಟಿ ರೂ. ಹಗರಣದಲ್ಲಿ ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್ ವಿರುದ್ಧ FIR ಗೆ ರಾಷ್ಟ್ರಪತಿ ಅನುಮೋದನೆ

ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರಿಗೆ ಸಂಕಷ್ಟ ಎದುರಾಗಿದೆ. 1,300 ಕೋಟಿ ರೂ. ಕ್ಲಾಸ್ ರೂಂ ಹಗರಣಕ್ಕೆ ಸಂಬಂಧಿಸಿದಂತೆ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಎಫ್‌ಐಆರ್‌ಗಳನ್ನು ನೋಂದಾಯಿಸಲು ಅಧ್ಯಕ್ಷೆ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದ್ದಾಗ, ಇವರು ಸಚಿವರಾಗಿದ್ದಾಗ ದೆಹಲಿ ಸರ್ಕಾರಿ ಶಾಲೆಗಳಲ್ಲಿ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ಹಗರಣ ನಡೆದಿದೆ.

2022 ರಲ್ಲಿ ದೆಹಲಿ ಸರ್ಕಾರದ ವಿಜಿಲೆನ್ಸ್ ನಿರ್ದೇಶನಾಲಯವು ಆಪಾದಿತ ಹಗರಣದ ತನಿಖೆಗೆ ಶಿಫಾರಸು ಮಾಡಿ ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 17, 2020 ರಂದು ಕೇಂದ್ರ ವಿಜಿಲೆನ್ಸ್ ಆಯೋಗ(ಸಿವಿಸಿ) ನೀಡಿದ ವರದಿಯಲ್ಲಿ, ಸಾರ್ವಜನಿಕ ಕಾರ್ಯ ಇಲಾಖೆ(ಪಿಡಬ್ಲ್ಯೂಡಿ) ದೆಹಲಿ ಸರ್ಕಾರಿ ಶಾಲೆಗಳಲ್ಲಿ 2,400 ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಅಕ್ರಮ ನಡೆದ ಬಗ್ಗೆ ತಿಳಿಸಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದರ್ ಜೈನ್ ವಿರುದ್ಧ ತನಿಖೆಗೆ ಗೃಹ ಸಚಿವಾಲಯವೂ (MHA) ಅನುಮೋದನೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರ ವಿರುದ್ಧದ ತನಿಖೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವಾಲಯ ಗುರುವಾರ ಲೆಫ್ಟಿನೆಂಟ್ ಗವರ್ನರ್ ಸಚಿವಾಲಯಕ್ಕೆ ತಿಳಿಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 17A ಅಡಿಯಲ್ಲಿ (2018 ರಲ್ಲಿ ತಿದ್ದುಪಡಿ ಮಾಡಿದಂತೆ), ಮಾಜಿ ಪಿಡಬ್ಲ್ಯೂಡಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular