ಡೆಂಘೀ ಬೆನ್ನಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲೀಗ ಚಿಕೂನ್ ಗುನ್ಯಾ ಹಾವಳಿ ಶುರು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡೆಂಘೀ ಜ್ವರ ಹಾವಳಿಗೆ ಮಕ್ಕಳು, ಜನ ತತ್ತರಿಸಿದ್ದಾರೆ. ಇದೇ ಹೊತ್ತಲ್ಲೇ ಬಳಿಕ ಚಿಕೂನ್ ಗುನ್ಯಾ ಹಾವಳಿ ಶುರು ಆಗಿದೆ.

ಮೋಡ ಕವಿದ ವಾತಾವರಣ, ಮಳೆ, ಬಿಸಿಲಿನ ವಾತಾವರಣ ಸೊಳ್ಳೆ ಉತ್ಪತ್ತಿಗೆ ಅನುಕೂಲಕರವಾಗಿದ್ದು, ಬೆಂಗಳೂರಿನಲ್ಲಿ ದಂಘೀ ಪ್ರಕರಣ ಹೆಚ್ಚಾಗುತ್ತಿವೆ. 4 ಸಾವಿರಕ್ಕೂ ಅಧಿಕ ಪ್ರಕರಣಗಳು ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಈಗ ಡೆಂಘೀ ಜೊತೆಗೆ ಚಿಕೂನ್ ಗುನ್ಯಾ ಪ್ರಕರಣಗಳು ಕೂಡ ಕಾಣಿಸಿಕೊಳ್ಳುತ್ತಿವೆ.

ಸೆಪ್ಟೆಂಬರ್ 1ರಿಂದ 18ರ ಅವಧಿಯಲ್ಲಿ ಬೆಂಗಳೂರಿನಲ್ಲಿ 32 ಚಿಕೂನ್ ಗುನ್ಯಾ ಪ್ರಕರಣ ವರದಿಯಾಗಿದ್ದು, 108 ಮಂದಿ ಪರೀಕ್ಷೆ ನಡೆಸಲಾಗಿದೆ. ಬಿಬಿಎಂಪಿ ದಕ್ಷಿಣ ವಲಯದಲ್ಲಿ ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ.

ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಸೊಳ್ಳೆಯಿಂದಲೇ ಡೆಂಘೀ ಮತ್ತು ಚಿಕೂನ್ ಗುನ್ಯಾ ಸೋಂಕು ಹರಡುತ್ತಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಆಸ್ಪತ್ರೆಗೆ ದಾಖಲಾದ ರೋಗಿಗಳ ಮೇಲೆ ನಿಗಾ ವಹಿಸಲಾಗಿದೆ. ಸೊಳ್ಳೆ ನಿಯಂತ್ರಣಕ್ಕೆ ನಿರಂತರವಾಗಿ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read